ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 5ಕ್ಕಿಂತ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ (ಜುಲೈ 2) ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಇಂದು ಜಿಲ್ಲಾಡಳಿತ ನೂತನ ಮಾರ್ಗಸೂಚಿ ಹೊರಡಿಸಿದೆ.
ಅದರಂತೆ ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಆದೇಶ ಜುಲೈ 5 ಮುಂಜಾನೆ 5 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ. ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ.