ಅನುದಾನ ರಹಿತ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ ಧನ ಬಿಡುಗಡೆ

ಬೆಂಗಳೂರು: ಕೋವಿಡ್ 19 ಎರಡನೆ ಅಲೆಯ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕರೇತರ ಸಿಬ್ಬಂದಿಗಳಿಗೆ ತಲಾ ಐದು ಸಾವಿರ ಪರಿಹಾರ ಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ರಾಜ್ಯದ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ 1,72,945 ಮಂದಿ ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿ ಸೇರಿ ಒಟ್ಟು 2,06,945  ಸಿಬ್ಬಂದಿಗೆ  ತಲಾ ಐದು ಸಾವಿರ ರೂಪಾಯಿಯಂತೆ ಒಟ್ಟು ₹ 10347.25 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ.