ಲಾಕ್‌ಡೌನ್‌ ನಿರ್ಬಂಧ ಸಡಿಲ; ಮಾಲ್‌, ದೇವಸ್ಥಾನ, ಬಾರ್ ಗಳಿಗೆ ಅವಕಾಶ: ವೀಕೆಂಡ್ ಕರ್ಫ್ಯೂ ರದ್ದು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್‌ ಲಾಕ್‌ಡೌನ್‌ ನಿಯಮಗಳನ್ನು ಇನ್ನಷ್ಟು ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಈ ಕೆಳಕಂಡಂತೆ ಲಾಕ್ ಡೌನ್ ನಿಯಮಗಳನ್ನು‌ ಸಡಿಲಿಕೆ ಮಾಡಲಾಗಿದೆ.
ಜುಲೈ 5ರ ಬೆಳಿಗ್ಗೆ 5ರಿಂದ ಜುಲೈ 19ರ ಬೆಳಿಗ್ಗೆ 5ರ ವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ.

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
2. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
3. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
4. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
5. ನೈರ್ಟ್ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

6. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
7. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
8. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ.
9. ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
10. ಮಾಲ್, ದೇವಸ್ಥಾನಗಳನ್ನು ತೆರೆಯಲು ಅವಕಾಶ

11. ಸಭೆ, ಸಮಾರಂಭಗಳಲ್ಲಿ 100 ಜನ ಭಾಗವಹಿಸಲು ಅವಕಾಶ
12. ವೀಕೆಂಡ್ ಕರ್ಫ್ಯೂ ರದ್ದು
13. ರಾತ್ರಿ 9 ಗಂಟೆಯವರೆಗೂ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ
14.ಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆಗಳಲ್ಲಿ ಶೇ.100 ಸಿಬ್ಬಂದಿಗೆ ಅವಕಾಶ.
15. ದೇವಾಲಯಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.