ದ್ವಿತೀಯ ಪಿಯುಸಿ ರಿಪೀಟರ್ಸ್​ ವಿದ್ಯಾರ್ಥಿಗಳು ಕೂಡ ಪಾಸ್: ಹೈಕೋರ್ಟ್ ಗೆ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು: 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ (ರಿಪೀಟರ್ಸ್) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತೋ?, ಇಲ್ಲವೋ ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಹತ್ವದ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಎಲ್ಲಾ 76 ಸಾವಿರ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ತಲಾ 35 ಅಂಕ ನೀಡುವುದರ ಮೂಲಕ ಪಾಸ್ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ರಿಪೀಟರ್ಸ್​ಗೆ ರಿಲೀಫ್ ಸಿಕ್ಕಂತಾಗಿದೆ. ಆದ್ರೆ, ಇದ್ರಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳು ಅನಿವಾರ್ಯ ಕಾರಣದಿಂದ ಫೇಲ್ ಆಗಿ, ಮತ್ತೆ ಉತ್ತಮ ಅಂಕ ಪಡೆಯುವ ನಿಟ್ಟಿನಲ್ಲಿ ಪರೀಕ್ಷೆ ಬರೆಯಬೇಕು ಎಂದುಕೊಂಡವರಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ? ಅನ್ನೋದು ಇನ್ನೂ ಸ್ಪಷ್ಟವಾಗಬೇಕಿದೆ.