ನಾಳೆಯಿಂದ (ಜುಲೈ 11) ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ನಾಳೆಯಿಂದ (ಜುಲೈ 11) ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರಿಗೆ ಭಕ್ತರಿಗೆ ಶ್ರೀಕೃಷ್ಣ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶಯದಂತೆ ನಾಳೆಯಿಂದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನ ಆರಂಭಿಸಲು ಪರ್ಯಾಯ ಅದಮಾರು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ.
ಭಕ್ತರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬೇಕೆಂದು ಮಠದ ಪ್ರಕಟಣೆ ತಿಳಿಸಿದೆ.