ಉಡುಪಿ: ಎರಡೂವರೆ ವರ್ಷದ ಮಗುವಿನ ಅಪಹರಣ

ಉಡುಪಿ: ಎರಡೂವರೆ ವರ್ಷದ ಮಗವೊಂದನ್ನು ಅಪಹರಣ ನಡೆಸಿರುವ ಘಟನೆ ಉಡುಪಿ ಕರಾವಳಿ ಬೈಪಾಸ್ ಬಳಿ ಇಂದು ನಡೆದಿದೆ.

ನಾಪತ್ತೆಯಾದ ಮಗುವನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಯ ಪುತ್ರ ಶಿವರಾಜ್ (2.4 ವರ್ಷ) ಎಂದು ಗುರುತಿಸಲಾಗಿದೆ.

ಈ ದಂಪತಿ ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶೆಡ್‌ವೊಂದರಲ್ಲಿ ವಾಸವಾಗಿದ್ದರು. ಈ ದಂಪತಿಗೆ ಬಾಗಲಕೋಟೆಯ ವ್ಯಕ್ತಿಯೊಬ್ಬನ ಪರಿಚಯವಾಗಿತ್ತು. ಇಂದು ಬೆಳಿಗ್ಗೆ ಮಗುವನ್ನು ಚಹಾ ಕುಡಿಸಿ ಕರೆದುಕೊಂಡು ಬರುತ್ತೇನೆ ಎಂದು ಹೇಳಿ ಆತ ಮಗುವನ್ನು ಕರೆದುಕೊಂಡು ಹೋಗಿದ್ದಾನೆ.

ಆದರೆ ಆತ ವಾಪಾಸ್ಸು ಬಾರದೆ ಮಗುವಿನೊಂದಿಗೆ ನಾಪತ್ತೆಯಾಗಿದ್ದಾನೆ ಎಂದು ಶಂಕಿಸಲಾಗಿದೆ.‌ ಈ ಬಗ್ಗೆ ದಂಪತಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.