ಮಂಗಳೂರು: ಕಳೆದ ಎಂಟು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ವೈದ್ಯರು ಯಶಸ್ವಿಯಾಗಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ
ವೈದ್ಯ ಡಾ. ಸುನಿಲ್ ಶೆಟ್ಟಿ ಮತ್ತು ಡಾ. ದಿವಾಕರ್ ತಂಡ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಸದ್ಯ ಆಸ್ಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಪತ್ನಿ ಬ್ಲೋಸಂ ಫೆರ್ನಾಂಡಿಸ್ ಮತ್ತು ಮಕ್ಕಳು ಹಾಗೂ ಮಾಜಿ ಸಚಿವರಾದ ರಮಾನಾಥ ರೈ ಮತ್ತು ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ನರಸಿಂಹಮೂರ್ತಿ, ನಾಗೇಶ್ ಕುಮಾರ್ ಉದ್ಯಾವರ ಮೊದಲಾದವರು ಆಸ್ಪತ್ರೆಯಲ್ಲಿ ಇದ್ದರು.