ಕುಂದಾಪುರ: ಸೈಕಲ್ ಗೆ ಕಾರು ಡಿಕ್ಕಿ; ಸೈಕಲ್ ಸವಾರ ಮೃತ್ಯು

ಕುಂದಾಪುರ: ಸೈಕಲ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಜಾಲಾಡಿಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್ (52) ಮೃತ ದುರ್ದೈವಿ. ಕಾರು ಢಿಕ್ಕಿಯಾದ ಪರಿಣಾಮ ರಾಮ ಕುಲಾಲ್ ಗಂಭೀರ ಗಾಯಗೊಂಡಿದ್ದು, ಅವರನ್ನು ಗಂಗೊಳ್ಳಿ ಆಪತ್ಭಾಂದವ ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.