ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ, ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ ಮಲ್ಪೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರರಿಗೆ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ಕಾರ್ಯಕ್ರಮವು ಆಗಸ್ಟ್ 2 ರಂದು ಬೆಳಗ್ಗೆ 9.30 ಕ್ಕೆ ಮಲ್ಪೆಯ ಮೀನುಗಾರರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ.
ಆರೋಗ್ಯ ಇಲಾಖೆಯ ವತಿಯಿಂದ ತಂಬಾಕು, ಮದ್ಯಪಾನ, ಮಧುಮೇಹ, ರಕ್ತದೊತ್ತಡ, ಮಲೇರಿಯಾ, ಡೆಂಗ್ಯೂ, ಕ್ಷಯರೋಗ, ಮಾನಸಿಕ ಆರೋಗ್ಯಗಳ ಕುರಿತು ತಪಾಸಣೆ ಹಾಗೂ ಮಾಹಿತಿ ಶಿಬಿರ ನಡೆಯಲಿದೆ.