ಟೋಕಿಯೊ‌ ಒಲಿಂಪಿಕ್ಸ್: ಭಾರತಕ್ಕೆ ಎರಡನೇ ಪದಕ

ಟೋಕಿಯೊ: ಟೋಕಿಯೊ‌ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಕಂಚಿನ ಪದಕ ಗೆದ್ದಿದ್ದಾರೆ.

ಇಂದು ಮಹಿಳಾ ಸಿಂಗಲ್ಸ್ ವಿಭಾಗದ ಕಂಚಿನ ಪದಕಕ್ಕೆ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹಿ ಬಿಂಗ್‌ಜಿಯಾವೊ ವಿರುದ್ಧ 21-13, 21-15ರ ಅಂತರದಲ್ಲಿ ಗೆಲುವು ದಾಖಲಿಸಿದರು.
ಇದರೊಂದಿಗೆ 26 ವರ್ಷದ ಸಿಂಧು, ಒಲಿಂಪಿಕ್ಸ್‌ನಲ್ಲಿ ಸತತವಾಗಿ ಎರಡನೇ ಬಾರಿಗೂ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು. ಈಗ ಟೋಕಿಯೊ ಒಲಿಂಪಿಕ್ಸ್‌ನಲ್ಲೂ ಕಂಚಿನ ಪದಕ ಗೆದ್ದಿದ್ದಾರೆ.