ಹಾಸನ: ಇಡೀ ರಾಜ್ಯದಲ್ಲೇ ತಲ್ಲಣಗೊಳಿಸಿದ್ದ ಮಂಗಗಳ ಮಾರಣಹೋಮ ಪ್ರಕರಣವನ್ನು ಭೇದಿಸುವಲ್ಲಿ ಹಾಸನ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ದಂಪತಿ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಗನೆ ಗ್ರಾಮದ ಜಮೀನು ಮಾಲೀಕರಾದ ಪ್ರಸನ್ನ, ರುದ್ರೇಗೌಡ, ವಾಹನ ಚಾಲಕ ಮಂಜು ಹಾಗೂ ಮಂಗಗಳನ್ನು ಸೆರೆಹಿಡಿದಿದ್ದ ಯಶೋಧ ಮತ್ತು ರಾಮು ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತನಿಖೆ ವೇಳೆ ಯಶೋಧ ಮತ್ತು ರಾಮು ದಂಪತಿ ಸತ್ಯ ಬಾಯಿಬಿಟ್ಟಿದ್ದು, ‘ಬೆಳೆ ಹಾನಿ ಮಾಡುತ್ತಿವೆ ಎಂದು ಜಮೀನಿನ ಮಾಲೀಕ ಪ್ರಸನ್ನ ಹಾಗೂ ರುದ್ರೇಗೌಡ ಕೋತಿಗಳ ಸೆರೆಗೆ 40 ಸಾವಿರಕ್ಕೆ ಗುತ್ತಿಗೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಅದರಂತೆ ದಂಪತಿ ಒಂದು ವಾರ ಕೋತಿಗಳಿಗೆ ಬ್ರೆಡ್, ಬಿಸ್ಕೆಟ್ ಹಾಕಿ ಪಳಗಿಸಿದರು. ಕೊನೆಗೆ ಜು. 28ರಂದು ಸುಮಾರು 40 ಕೋತಿಗಳನ್ನು ಸೆರೆ ಹಿಡಿದಿದ್ದರು. ಅವುಗಳನ್ನು ಗೋಣಿ ಚೀಲಗಳಲ್ಲಿ ಹಾಕಿ ವಾಹನದಲ್ಲಿ ಸಾಗಿಸುತ್ತಿದ್ದಾಗ, ಉಸಿರುಗಟ್ಟಿ ಮೃತಪಟ್ಟಿತ್ತು. ಬಳಿಕ ಮೃತಪಟ್ಟಿದ್ದ ಕೋತಿಗಳನ್ನು ಬೇಲೂರು ತಾಲ್ಲೂಕಿನ ಚೌಡನಹಳ್ಳಿ ಎಂಬಲ್ಲಿ ಬಿಸಾಡಿ ಹೋಗಿದ್ದೇವೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದಾರೆ.