ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನ ಮಹಿಳಾ ಹಾಕಿ ಸೆಮಿಫೈನಲ್ ನಲ್ಲಿ ಭಾರತ ಮಹಿಳಾ ತಂಡವು ಸೋಲು ಕಂಡಿದ್ದು, ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಗಿದೆ.
ಭಾರತ ತಂಡವು ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು ಅನುಭವಿಸಿದೆ. ಇದರೊಂದಿಗೆ ಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲವಾಗಿದೆ.
ಇದೇ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯ ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ಬರೆದಿರುವ ಮಹಿಳಾ ತಂಡಕ್ಕೀಗ ಮಗದೊಂದು ಅವಕಾಶವಿದ್ದು, ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ.