ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂರನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೋಟ ಶ್ರೀನಿವಾಸ ಪೂಜಾರಿ ಹಾಗೂ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಾರಿ ಕರಾವಳಿಯ ಉಡುಪಿ ಜಿಲ್ಲೆಗೆ ಅವಳಿ ಸಚಿವರನ್ನು ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವರಾದ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಪರವಾಗಿ ಕುಯಿಲಾಡಿ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.