(ಉಡುಪಿ ಎಕ್ಸ್‌ಪ್ರೆಸ್ ವರದಿ)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಇಂದು ಸಿಎಂ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಸಭೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಲ್ಲಾ ಗಡಿ ಜಿಲ್ಲೆಗಳಲ್ಲಿ ಹದ್ದಿನ ಕಣ್ಣಿಡಲು ಸೂಚನೆ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ನಾಳೆ (ಆ.7) ವಾರಾಂತ್ಯದ ಕರ್ಪ್ಯೂ ಜಾರಿ ಜಾರಿಯಾಗಲಿದೆ. ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು, ಬಿಜಾಪುರ, ಬೀದರ್, ಬೆಳಗಾವಿ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಾಗಲಿದೆ ಎಂದರು.
ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅವಧಿಯಲ್ಲಿ ಬದಲಾಗಿದ್ದು, ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂದರು.