ಬೆಂಗಳೂರು: ಕೋವಿಡ್ ಕಾರಣದಿಂದ ಈ ಸಲ ವಿಶೇಷವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿಸಿ ನಾಗೇಶ್ ಪ್ರಕಟಿಸಿದರು.
ಕೋವಿಡ್ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್ ಮಾಡುವುದಾಗಿ ಮೊದಲೇ ಈ ಹಿಂದಿನ ಶಿಕ್ಷಣ ಸಚಿವರು ಭರವಸೆ ನೀಡಿದ್ದ ಅವರು, ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು ಪಾಸ್ ಮಾಡಲಾಗಿದೆ ಎಂದರು. ಶೇ. 99.9 ಪಾಸ್ ಆಗಿದ್ದಾರೆ. ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಫೇಲು ಮಾಡಲಾಗಿದೆ ಎಂದಿದ್ದಾರೆ.
ಎ ಪ್ಲಸ್ ಗ್ರೇಡ್ನಲ್ಲಿ 1, 28, 931 ವಿದ್ಯಾರ್ಥಿಗಳು ಪಾಸಾಗಿದ್ದರೆ, ಎ ಗ್ರೇಡ್ನಲ್ಲಿ 2,50,317 ಲಕ್ಷ ಪಾಸಾಗಿದ್ದಾರೆ. ಬಿ ಅಲ್ಲಿ 2,87,684 ಲಕ್ಷ ವಿದ್ಯಾರ್ಥಿಗಳು, ಸಿ ಗ್ರೇಡ್ನಲ್ಲಿ 1,13,610 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳು ಕೃಪಾಂಕ ಪಡೆದು ಪಾಸ್ ಆಗಿದ್ದಾರೆ, 13 ವಿದ್ಯಾರ್ಥಿಗಳಿಗೆ ವಿಷಯವೊಂದಕ್ಕೆ ಗರಿಷ್ಟ 28 ಕೃಪಾಂಕ ನೀಡಿ ಪಾಸ್ ಮಾಡಲಾಗಿದೆ ಎಂದು ತಿಳಿಸಿದರು.
157 ಮಕ್ಕಳು 625 ಕ್ಕೆ 625 ಅಂಕ ಪಡೆದಿದ್ದಾರೆ, 289 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದರೆ, ಇಬ್ಬರಿಗೆ 622 ಅಂಕ ಸಿಕ್ಕಿದೆ. 621 ಅಂಕ 449 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ.