ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ ₹5 ಲಕ್ಷ ಅನುದಾನ ನೀಡಲು ಅನುಮತಿ ಕೋರಿ ಮುಖ್ಯಮಂತ್ರಿಯವರಿಗೆ ಶೀಘ್ರದಲ್ಲೇ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.