ಕುಂದಾಪುರ: ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಕುಂದಾಪುರ: ಬೈಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು  ನಡೆದಿದೆ.

ಮೃತ ಬೈಕ್ ಸವಾರನನ್ನು ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈತ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಟೆಂಪೋ ಡಿಕ್ಕಿಯಾಗಿದೆ.

ಇದರಿಂದ ಗಂಭೀರ ಗಾಯಗೊಂಡ ಆತನನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.