ಉಡುಪಿ: ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಇಂದು ನಗರದಲ್ಲಿ ಬೃಹತ್ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿ ಬನ್ನಂಜೆಯ ಶ್ರೀ ನಾರಾಯಣಗುರು ವೃತ್ತದಲ್ಲಿ ರಾಷ್ಟ್ರ ಧ್ವಜವನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಶಂಖ ನಾದದೊಂದಿಗೆ ಬೈಕ್ ಜಾಥಾಕ್ಕೆ ಚಾಲನೆ ನೀಡಿದರು.
ಬನ್ನಂಜೆಯಿಂದ ಹೊರಟ ವಾಹನ ಜಾಥಾ ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಸಮಾಪನಗೊಂಡಿತು.
ಬಳಿಕ ಕೇಸರಿ ಬಿಳಿ ಹಸಿರು ಪುಷ್ಪಗಳೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಭಾರತದ ಭೂಪಟವನ್ನು ರಚಿಸಿ 75 ಹಣತೆಗಳನ್ನು ಪ್ರಜ್ವಲಿಸಲಾಯಿತು.
ಜಿಲ್ಲಾ ಬಿಜೆಪಿ ವತಿಯಿಂದ ನಡೆದ 75ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಸಲೀಂ ಅಂಬಾಗಿಲು, ರಾಜ್ಯ ಫಲಾನುಭವಿಗಳ ಪ್ರಕೋಷ್ಠದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ.
ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ಪ್ರಭು, ಬಿಜೆಪಿ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಕೊಡಿಬೆಟ್ಟು, ಸಂದೀಪ್ ಭಕ್ತ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಪ್ರಮೀಳಾ ಹರೀಶ್, ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳಾದ ಸೋನಾ, ವಿದ್ಯಾ ಪೈ, ರಜನಿ ಹೆಬ್ಬಾರ್, ಮಾಯಾ ಕಾಮತ್, ನೀರಜಾ ಶೆಟ್ಟಿ, ಅಶ್ವಿನಿ ಶೆಟ್ಟಿ, ಪೂರ್ಣಿಮಾ ರತ್ನಾಕರ್, ರೇಣುಕಾ, ಸುಜಾಲ ಸತೀಶ್, ಸರೋಜಾ ಶೆಣೈ, ಸುಧಾ ಪೈ, ಲೈಲಾ ಹಾಗೂ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.