ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತದಾನಕ್ಕೆ ತೆರಳುವಾಗ ಭಾರತ ಚುನಾವಣಾ ಆಯೋಗವು ನೀಡಿದ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ(ಎಪಿಕ್)ಯನ್ನು ತೋರಿಸಿ ಮತದಾನ ಮಾಡುವಂತೆ ತಿಳಿಸಲಾಗಿದ್ದು, ಒಂದು ವೇಳೆ ಗುರುತಿನ ಚೀಟಿ(ಎಪಿಕ್) ಹಾಜರುಪಡಿಸಲು ಅಸಾಧ್ಯವಾದಲ್ಲಿ ಮತದಾನದ ಗುರುತಿನ ಚೀಟಿ (ಎಪಿಕ್ ಕಾರ್ಡ್ ) ಬದಲು ಈ ಕೆಳಗಿನ 11 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರು ಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.
ಪಾಸ್ಪೋರ್ಟ್, ಚಾಲನಾ ಪರವಾನಿಗೆ, ಕೇಂದ್ರ/ರಾಜ್ಯ/ಸಾರ್ವಜನಿಕ ಉದ್ದಿಮೆ ಸಂಸ್ಥೆ/ ಸಾರ್ವಜನಿಕ ನಿಯಂತ್ರಿತ ಸಂಸ್ಥೆಯು ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿಯ ಪಾಸ್ ಬುಕ್, ಪಾನ್ ಕಾರ್ಡ್, ಎಂ.ಎನ್.ಆರ್.ಇ.ಜಿ. ನೀಡಿರುವ ಜಾಬ್ಕಾರ್ಡ್, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸಂಸತ್ ಸದಸ್ಯರು/ ಶಾಸಕರಿಗೆ ನೀಡಲಾದ ಅಧೀಕೃತ ಸರಕಾರಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೊಂದು ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.