ಮಂಗಳೂರು: ರೈಲು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸಾವು

ಮಂಗಳೂರು: ರೈಲಿನಡಿಗೆ ಸಿಲುಕಿ ಇಬ್ಬರೂ ಮಹಿಳೆಯರು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನ ಮಹಾಕಾಳಿ ಪಡ್ಪು ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ವಸಂತಿ(50), ಪ್ರೇಮಾ (48) ಎಂದು ಗುರುತಿಸಲಾಗಿದೆ. ಈ ಮಹಿಳೆಯರು ಎಂದಿನಂತೆ ರೈಲು ಹಳಿ ದಾಟಿ ಬೀಡಿ ಕೊಡಲೆಂದು ಬೀಡಿ ಬ್ರ್ಯಾಂಚ್‌ಗೆ ಹೋಗುತ್ತಿದ್ದರು.

ಈ ವೇಳೆ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಮೃತ ಮಹಿಳೆಯರಿಬ್ಬರೂ ಬೀಡಿ ಕಾರ್ಮಿಕರಾಗಿದ್ದು, ನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದರು ಎಂದು ತಿಳಿದುಬಂದಿದೆ.