ಕಾರ್ಕಳ: ಬಿಜೆಪಿ ಯುವ ಮೋರ್ಚಾ ಮಹಾಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ: ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಯ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಈ ಕೆಳಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಹೆಬ್ರಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾಗಿ ಸುರೇಂದ್ರ ವರಂಗ, ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಂದ್ರ ಚಾರ ಹಾಗೂ ಸಂದೇಶ್ ಆಚಾರ್ಯ, ನಿಟ್ಟೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಾಕೇಶ್ ಅಮೀನ್ ಪ್ರಧಾನ ಕಾರ್ಯದರ್ಶಿಯಾಗಿ ಹಂಸರಾಜ್ ಶೆಟ್ಟಿ, ಕುಕ್ಕುಂದೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಪ್ರಭು.

ಮುಡಾರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಜತ್ ರಾಮಮೋಹನ್ ಪ್ರಧಾನ ಕಾರ್ಯದರ್ಶಿಗಳಾಗಿ ನೀಲೇಶ್ ತೆಂಡೂಲ್ಕರ್ ಹಾಗೂ ಪ್ರಶಾಂತ್ ಪೂಜಾರಿ, ಮುಂಡ್ಕೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಸಾಲಿಯಾನ್, ಮರ್ಣೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗೌತಮ ನಾಯಕ್ ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿತ್ ಸೇರ್ವೆಗಾರ್ ಹಾಗೂ ದಿನೇಶ್ ಪೂಜಾರಿ.

ಕಾರ್ಕಳ ನಗರ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾಗಿ ಸ್ವಸ್ತಿಕ್ ಮಡಿವಾಳ್ ಹಾಗೂ ಜಿತೇಶ್ ದೇವಾಡಿಗ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಸಾಲಿಯಾನ್ ಹಾಗೂ ಭರತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ