ಉಡುಪಿ: ಬೆಂಗಳೂರಿನ ಜೆಫ್ ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಪ್ರೈಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಗೋವಿಂದ ಬಾಬು ಪೂಜಾರಿ ಬಿಜೂರು ಅವರು ಭಾರತ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರು ಜನ್ಮಭೂಮಿ ಫೌಂಡೇಶನ್ ವತಿಯಿಂದ ಬೆಂಗಳೂರಿನ ಗಾಂಧಿನಗರದ ಸ್ಯಾಂಕ್ ಟಮ್ ಹೋಟೆಲ್ ನಲ್ಲಿ ಆ.29ರಂದು ಸಂಜೆ 5 ಗಂಟೆಗೆ ನಡೆಯುವ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಕೊರೊನಾ ವಾರಿಯರ್ಸ್ ಗೆ ಅಭಿನಂದನಾ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.