ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಅಕ್ರಮ ಗೋ ಸಾಗಾಟನ್ನು ಹಿಂದೂ ಸಮಾಜ ಸಹಿಸುವುದಿಲ್ಲ. ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ರೀತಿಯ ಅಕ್ರಮ ಮತಾಂತರ ಮತ್ತು ಗೋ ಕಳ್ಳತನ, ಅಕ್ರಮ ಗೋ ಸಾಗಾಟವನ್ನು ಬಿಜೆಪಿ ಅಥವಾ ಹಿಂದೂ ಸಂಘಟನೆಗಳು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗೋ ಹಂತಕರು ಮತ್ತು ಮತಾಂತರವನ್ನೇ ಕಾಯಕವನ್ನಾಗಿಸಿಕೊಂಡಿರುವ ಸಮಾಜ ಘಾತುಕ ಶಕ್ತಿಗಳು ಎಚ್ಚರ ವಹಿಸುವುದು ಒಳಿತು ಎಂದು ಕುಯಿಲಾಡಿ ಎಚ್ಚರಿಕೆ ನೀಡಿದ್ದಾರೆ.