ಕಾಪು: ಬಿಜೆಪಿ ರಾಜ್ಯಾಧ್ಯಕ್ಷರಿಂದ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಕಾಪು: ಕಾಪು ಕ್ಷೇತ್ರದ ಕಟಪಾಡಿ ಪಂಚಾಯತ್ ಮೂಡಬೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ 91 ನೇ ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ‌ ಇವರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು.

ಆಗಮಿಸುತ್ತಿದ್ದಂತೆ ರಾಜ್ಯಾಧ್ಯಕ್ಷರನ್ನು ಬೂತ್ ಅಧ್ಯಕ್ಷರು ಹಾರಾರ್ಪಣೆ ಮಾಡಿ ಸ್ವಾಗತಿಸಿದರೆ, ಮಹಿಳೆಯರಿಂದ ಆರತಿ‌ಬೆಳಗಿಸಿ ಚಂಡೆ ಹಾಗೂ ಪೂರ್ಣಕುಂಭದೊಡನೆ ಮನೆ ತನಕ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಾಮಫಲಕ ಅಳವಡಿಸುವ ಮೊದಲು ಗೋಪೂಜೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿಭಾಗ ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಣ ಸದಸ್ಯರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ‌ ಸುವರ್ಣ, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ ಕುರ್ಕಾಲು, ವಿಭಾಗ ಸಂಘಟನಾ ಪ್ರಧಾನ‌ ಕಾರ್ಯದರ್ಶಿ ಪ್ರಸಾದ್ ಮಂಗಳೂರು, ಜಿಲ್ಲಾ ಪ್ರಧಾನ‌ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ರಾಜ್ಯ ಎಸ್ ಸಿ‌ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಕ್ಷದ ಪ್ರಮುಖರಾದ ಜಗದೀಶ್ ಅಧಿಕಾರಿ ಮೂಡಬಿದ್ರೆ ಮತ್ತಿತರರು ಉಪಸ್ಥಿತರಿದ್ದರು.