ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2021-22ನೇ ಸಾಲಿನಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟç ಮಟ್ಟವನ್ನು ಪ್ರತಿನಿಧಿಸಿದ ಕರ್ನಾಟಕದ 50 ವರ್ಷ ಮೇಲ್ಪಟ್ಟ, ವಾರ್ಷಿಕ ಆದಾಯ ಗರಿಷ್ಠ 20 ಸಾವಿರ ರೂ ಮೀರಿರದ ಸಂಕಷ್ಟದಲ್ಲಿರುವ ಮಾಜಿ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ತಮ್ಮ ಜನನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಕ್ರೀಡಾ ಪ್ರಮಾಣ ಪತ್ರದೊಂದಿಗೆ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30ರೊಳಗಾಗಿ ಉಡುಪಿ ಜಿಲ್ಲಾ ಕ್ರೀಡಾಂಗಣ ಕಛೇರಿಗೆ ಸಲ್ಲಿಸಬಹುದಾಗಿದ್ದು, ಹಿರಿಯ ಕ್ರೀಡಾಪಟುಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2521324 ನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.