ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈ ಮಧ್ಯೆ ಕಾಂಗ್ರೆಸ್‌ನ ಪಂಜಾಬ್ ಘಟಕದಲ್ಲಿ ಮತ್ತೊಮ್ಮೆ ಭಿನ್ನಮತ ಸ್ಫೋಟಗೊಂಡಿದೆ.
ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಜೊತೆಗಿನ ವೈಮನಸ್ಸಿನಿಂದ ಬೇಸತ್ತಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನವಜೋತ್ ಸಿಂಗ್ರನ್ನ ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಆದರೆ ಅಮರಿಂದರ್ ಸಿಂಗ್ಗೆ ಇದು ಅಸಮಾಧಾನ ಉಂಟು ಮಾಡಿತ್ತು.
ತಮ್ಮನ್ನು ಪಕ್ಷದಲ್ಲಿ ಸೈಡ್ಲೈನ್ ಮಾಡಲಾಗುತ್ತಿದೆ ಅನ್ನೋದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಆರೋಪ. ಇಂದು ನಡೆದ ಒಂದಿಷ್ಟು ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆ ಸೋನಿಯಾ ಗಾಂಧಿಗೆ ಕರೆ ಮಾಡಿ ಮಾತನಾಡಿರೋ ಕ್ಯಾಪ್ಟನ್, ಪಕ್ಷದಲ್ಲಿ ನನ್ನನ್ನ ಸೈಡ್ಲೈನ್ ಮಾಡಿದ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತೇನೆಂದು ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರು ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.












