ಉಡುಪಿ: ಉಡುಪಿ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನ ಸಮನ್ವಯಾಧಿಕಾರಿ, ಶಿಕ್ಷಣ ಚಿಂತಕ ಡಾ. ಮಹಾಬಲೇಶ್ವರ ರಾವ್ ಅವರನ್ನು ಕರ್ನಾಟಕ ರಾಜ್ಯ ಸರಕಾರ ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರ ಅನುಷ್ಠಾನ ಕುರಿತಾದ ಕಾರ್ಯಪಡೆಯ ಸದಸ್ಯರನ್ನಾಗಿ ನೇಮಕ ಮಾಡಿದೆ.
ಮಹಾಬಲೇಶ್ವರ ರಾವ್, ಸ್ವತಂತ್ರ ಹಾಗೂ ಅನುವಾದ ಎರಡೂ ಸೇರಿ 145ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಪುಸ್ತಕ ಬಹುಮಾನ ಪಡೆದಿರುವ ಡಾ. ರಾವ್, ಕಳೆದ ನಲವತ್ತೈದು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.