ಬೆಂಗಳೂರು: ಆಸೆ– ಆಮಿಷಗಳನ್ನು ಒಡ್ಡಿ ಅಥವಾ ಬಲವಂತವಾಗಿ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವುದನ್ನು ನಿಷೇಧಕ್ಕಾಗಿ ಕಾಯ್ದೆ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ ಇಚ್ಛೆಯಿಂದ ಮತಾಂತರಕ್ಕೆ ಅವಕಾಶವಿದೆ. ಆದರೆ, ಹಣ ಮತ್ತು ಇನ್ನಿತರ ರೀತಿಯ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ. ಕಲಬುರ್ಗಿ ಮತ್ತಿತ್ತರ ಕಡೆಗಳಲ್ಲಿ ಭೇಟಿ ನೀಡಿದಾಗ ಮತಾಂತರ ಮಾಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಪದೇ ಪದೇ ಈ ವಿಚಾರ ಕೇಳಿ ಬರುತ್ತಿರುವ ಕಾರಣದಿಂದ ಶಾಶ್ವತವಾಗಿ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದರು.

















