ಮಲ್ಪೆ: ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ‘ಸ್ವಚ್ಛ ಭಾರತ ಪರಿಕಲ್ಪನೆ’ಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ಶ್ರಮದಾನದ ಮೂಲಕ ಮಲ್ಪೆ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದರು.
ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಣಿ ಸದಸ್ಯರು ಹಾಗೂ ಮಹಿಳಾ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.