ಮುದ್ದಾದ ಎರಡು ಮಕ್ಕಳಿಗೆ ವಿಷ ಉಣಿಸಿ ತಾಯಿ ಆತ್ಮಹತ್ಯೆ

ಗದಗ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಯಿಯೊಬ್ಬರು ಮುದ್ದಾದ ಎರಡು ಮಕ್ಕಳಿಗೆ ವಿಷ ಉಣಿಸಿ, ತಾನೂ ಆತ್ಮಹತ್ಯೆಗೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

27 ವರ್ಷದ ಯಲ್ಲವ್ವ ಚಂದಣ್ಣವರ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನೆರಡು ಮಕ್ಕಳಿಗೆ ವಿಷ ಉಣಿಸಿದ್ದಳು.

ಅದರ ಪರಿಣಾಮ 2 ವರ್ಷದ ಸ್ವಪ್ನಾ ಎಂಬ ಹೆಣ್ಣು ಮಗು ಸಾವನ್ನಪ್ಪಿದರೆ, 6 ವರ್ಷದ ಬಾಲಕ ಸಮರ್ಥ್ ಗಂಭೀರ ಸ್ಥಿತಿಯಲ್ಲಿ ಇದ್ದು, ಆತನಿಗೆ ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೊದಲು ತಾಯಿ ಕ್ರಿಮಿನಾಶಕ ಸೇವನೆ ಮಾಡಿ ಬಳಿಕ ಮಕ್ಕಳಿಗೆ ಕುಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.