ಉಡುಪಿ: ಉಡುಪಿಯ ಜೀವನದಿಯಾದ ಸ್ವರ್ಣ ನದಿಗೆ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಬಳಿಯ ಕೃಷ್ಣಾಂಗಾರಕ ಸ್ನಾನಘಟ್ಟದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಇಂದು ಬಾಗಿನ ಅರ್ಪಿಸಿದರು.
ಸಚಿವರಿಗೆ ಪತ್ನಿ ಪ್ರಿಯಾಂಕ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮರಾವ್, ಎಸ್ಪಿ ವಿಷ್ಣುವರ್ಧನ್, ಎಡಿಸಿ ಸದಾಶಿವ ಪ್ರಭು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸ್ಥಾಯೀ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಆಯುಕ್ತ ಉದಯ ಶೆಟ್ಟಿ, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರ ಶೇಷ ಕೃಷ್ಣ, , ಸ್ಥಳೀಯ ನಗರಸಭಾ ಸದಸ್ಯೆ ಅರುಣಾ ಸುಧಾಮ, ಅರ್ಚಕ ನವೀನ್ ಶಿವತ್ತಾಯ ನಗರಸಭಾ ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹೆರ್ಗ ಹರಿಪ್ರಸಾದ್ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು. ಗಣಪತಿ ಭಟ್, ಡೆನಿಸ್ ಡಿಸೋಜ, ನಾಗರಾಜ್ ಶಿವತ್ತಾಯ ಸಹಕರಿಸಿದರು. ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ಸಂಯೋಜಿಸಿದರು.
ಬಳಿಕ ಮಾತನಾಡಿದ ಸಚಿವ ಸುನಿಲ್ ಕುಮಾರ್,
ಪ್ರತಿವರ್ಷ ಈ ಪುಣ್ಯಕ್ಷೇತ್ರದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುವ ಸಂಪ್ರದಾಯವಿದೆ. ಈ ಹಿನ್ನೆಲೆಯಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸ್ನಾನ ಘಟ್ಟ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದ್ದು, ಈ ಕಾಮಗಾರಿಗೆ ಈಗಾಗಲೇ ಮಂಜೂರಾತಿ ಕೂಡ ದೊರಕಿದೆ. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಪ್ರಕೃತಿಯನ್ನು ಪೂಜಿಸಿ ಆರಾಧಿಸಿಕೊಂಡು ಬರುವುದು ಭಾರತೀಯ ಸಂಸ್ಕೃತಿಯ ಸಂಪ್ರದಾಯ. ನದಿ, ಭೂಮಿ, ಪ್ರಕೃತಿಯನ್ನು ಪೂಜಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಅದರ ಭಾಗವಾಗಿ ಇಂದು ಉಡುಪಿಯ ಜೀವನದಿಯಾದ ಸ್ವರ್ಣ ನದಿಗೆ ಬಾಗಿನ ಅರ್ಪಿಸಲಾಗಿದೆ. ಸ್ವರ್ಣೆ ವರ್ಷಪೂರ್ತಿ ತುಂಬಿ ಹರಿಯಬೇಕು. ಅದರಿಂದ ಕೃಷಿ ಚಟುವಟಿಕೆ ಸಮೃದ್ಧಿಯಾಗಬೇಕು ಎಂದರು.