ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಹಾನಗಲ್​​ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಆಯ್ಕೆ

ಶಿವರಾಜ ಸಜ್ಜನ್(ಎಡ) ಹಾಗೂ ರಮೇಶ ಭೂಸನೂರ(ಬಲ)

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನು ಘೋಷಿಸಿದೆ.

ಸಿಂದಗಿ ಕ್ಷೇತ್ರದಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರು ಅವರನ್ನು ಕಣಕ್ಕಿಳಿಸಿದ್ರೆ, ಹಾನಗಲ್​​ ವಿಧಾನಸಭೆ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಮಾಜಿ ಎಂಎಲ್ ಸಿ ಶಿವರಾಜ್ ಸಜ್ಜನ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಸಿಂದಗಿ ಕ್ಷೇತ್ರಕ್ಕೆ ರಮೇಶ ಭೂಸನೂರ ಅವರಿಗೆ‌ ನಿರೀಕ್ಷೆಯಂತೆ‌ ಟಿಕೆಟ್ ನೀಡಲಾಗಿದೆ. ಆದರೆ, ಹಾನಗಲ್ ನಲ್ಲಿ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ಮಿಸ್ ಆಗಿದೆ.

ಎರಡೂ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.