ವಿಟ್ಲ: ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದ ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22 ) ಅವರ ಮೃತದೇಹ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪವಿರುವ ಕೆರೆಯಲ್ಲಿ ಇಂದು ಪತ್ತೆಯಾಗಿದೆ.
ಈಕೆ ಡೆಂಟಲ್ ಕ್ಲಿನಿಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಇಂದು ಮುಂಜಾನೆ ಕೆರೆಯಲ್ಲಿ ನಿಶ್ಮಿತಾ ಅವರ ಮೃತದೇಹ ಪತ್ತೆಯಾಗಿದೆ. ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.