ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕುಟುಂಬ ಸಮೇತರಾಗಿ ಮಂಗಳವಾರ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದರು.

ದೇವಳದ ಪ್ರಧಾನ ಅರ್ಚಕ ಶ್ರೀಧರ್ ಅಡಿಗ ಅವರ ನೇತೃತ್ವದಲ್ಲಿ ದೇವಳದ ವಿಶೇಷ ಪೂಜೆ ಚಂಡಿಕಾ ಹೋಮದಲ್ಲಿ ಭಾಗಿಯಾದರು.

ದೇವಸ್ಥಾನದ ವತಿಯಿಂದ ಗೃಹ ಸಚಿವ ದಂಪತಿಗಳಿಗೆ ಗೌರವಿಸಲಾಯಿತು. ಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ಸೇನಾಪುರ, ಸಂಧ್ಯಾ ರಮೇಶ್ ಮಚ್ಚಟ್ಟು ಇದ್ದರು.

ದೇವಳದ ಸುಭದ್ರತೆಗೆ ಅನುಗುಣವಾಗಿ 24*7 ಸರ್ಕಾರ ವತಿಯಿಂದ ಇಬ್ಬರು ಗನ್‍ಮ್ಯಾನ್ ಅವಶ್ಯಕತೆ ಇದೆ ಎಂದು ಗೃಹ ಸಚಿವರಲ್ಲಿ ಮನವಿ ನೀಡಲಾಗಿದೆ ಎಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ಮಹೇಶ್ ಅವರು ತಿಳಿಸಿದ್ದಾರೆ.