ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಚಿವ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು. ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದರು.
ಮಾರ್ಚ್ 25 ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ಎರಡು ದಿನದಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ. ಕೆಲಸ ಮಾಡುವ ಸಂಸದರನ್ನು ಆಯ್ಕೆ ಮಾಡಿ ಎಂದು ವಿನಂತಿಸಿಕೊಂಡರು.