ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡುತ್ತಿದೆ. ಒಂದು ದಿನ ತಡವಾಗಿ ಚಿತ್ರ ಬಿಡುಗಡೆಯಾದರೂ, ಹಣ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ.
ಚಿತ್ರ ಬಿಡುಗಡೆಯಾದ ನಾಲ್ಕೇ ದಿನದಲ್ಲಿ ₹ 40.5 ಕೋಟಿಗೂ ಅಧಿಕ ಹಣ ಗಳಿಸಿದೆ ಎಂದು ಸ್ವತಃ ಕಿಚ್ಚ ಸುದೀಪ್ ಅವರೇ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ವಾರ ಕೂಡ ಚಿತ್ರ ಉತ್ತಮವಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಇನ್ನಷ್ಟು ಗಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೋಟಿಗೊಬ್ಬ 3’ ಬಿಡುಗಡೆಯಾದ ಮೊದಲ ದಿನವೇ ಅಂದಾಜು ₹ 12 ಕೋಟಿಯಷ್ಟು ಗಳಿಸಿತ್ತು ಎಂದು ವರದಿಗಳು ಹರಿದಾಡಿದ್ದವು. ಪ್ರಸ್ತುತ ಚಿತ್ರತಂಡದಿಂದ ಅಧಿಕೃತ ಲೆಕ್ಕ ಬಿಡುಗಡೆಯಾಗಿದ್ದು, 4 ದಿನಕ್ಕೆ ₹ 40.5 ಕೋಟಿ ಗಳಿಸುವುದರೊಂದಿಗೆ ಭರ್ಜರಿ ಯಶಸ್ಸು ಕಂಡಿದೆ.












