ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ವಿವಿಧ ಬ್ಲಾಕ್ ಗಳಿಗೆ ಪದಾಧಿಕಾರಿಗಳ ನೇಮಕವಾಗುತ್ತಿದ್ದು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಬೈಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಾರ್ ಸುವರ್ಣ ಅವರನ್ನು,ಜಿಲ್ಲಾಧ್ಯಕ್ಷ ಸಂಕಪ್ಪ ಎ ನೇಮಕ ಗೊಳಿಸಿದ್ದಾರೆ.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಸೂಚನೆಯಂತೆ, ಹಿಂದುಳಿದ ಘಟಕದ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ್ ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ನೀಡಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ಅಧ್ಯಕ್ಷ ಸಂಕಪ್ಪಯ್ಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.
ವಾರಂಬಳ್ಳಿ ಗ್ರಾಮ ಪಂಚಾಯತ್ ನ ಸದಸ್ಯರಾಗಿರುವ ದೇವಕಿ ಪುಜಾರ್ತಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಉಪಾಧ್ಯಕ್ಷೆಯಾಗಿ, ಬೈಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದಯ ಸುವರ್ಣ ರವರನ್ನು ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ.
ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಜಯ ಪೂಜಾರಿ, ಮೂಡಬೆಟ್ಟು ಕಲ್ಯಾಣ್ ಪುರ್ ಗ್ರಾಮ ಪಂಚಾಯತ್ ಸದಸ್ಯ ವಿಠಲ ಪೂಜಾರಿ ಮತ್ತು ಹಾರಾಡಿ ಗ್ರಾಮ ಪಂಚಾಯಿತಿ ಸದಸ್ಯೆ ಅನುಷಾ ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಸದಸ್ಯರನ್ನಾಗಿ ಜಿಲ್ಲಾಧ್ಯಕ್ಷ ಸಂಕಪ್ಪ ಎ ನೇಮಕಗೊಳಿಸಿದ್ದಾರೆ.