ತೈಲ ಹಾಗೂ ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್, ಅಸೋಸಿಯೇಷನ್ ಆಫ್ ಎನರ್ಜಿ ಎಂಜಿನಿಯರ್, ಜಿಯಾಲಜಿಸ್ಟ್, ಕೆಮಿಸ್ಟ್, ಟ್ರಾನ್ಸ್ಫೋರ್ಟ್ ಆಫೀಸರ್
ಹುದ್ದೆಗಳ ಸಂಖ್ಯೆ: 309
ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಬಿಇ, ಬಿಟೆಕ್ ಹಾಗೂ ಎಂಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಸೋಸಿಯೇಶನ್ ಆಫ್ ಎನರ್ಜಿ ಎಂಜಿನಿಯರ್ ಹುದ್ದೆಗೆ ಗರಿಷ್ಠ 28 ವರ್ಷ ಹಾಗೂ ಇತರ ಹುದ್ದೆಗಳಿಗೆ ಗರಿಷ್ಠ 30 ವರ್ಷ.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 300. ಎಸ್ಸಿ/ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 1, 2021
ಹೆಚ್ಚಿನ ಮಾಹಿತಿಗೆ: www.ongcindia.com