ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕಮರುಪಾತಿ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ:  ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಎಲ್.ಸಿ ನಂತರದ (ಪೋಸ್ಟ್ ಮ್ಯಾಟ್ರಿಕ್) ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಹಾಗೂ ಶುಲ್ಕ ಮರುಪಾವತಿ ಮತ್ತು ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕ್ಕೋತ್ತರ ಶಿಕ್ಷಣದಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ssp.postmatric.karnataka.gov.in/2021 ಮೂಲಕ ಮತ್ತು ಶುಲ್ಕಮರುಪಾವತಿ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಛೇರಿ ಇಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.ಸಂ : 0820-2574810/811 ನ್ನು ಸಂಪರ್ಕಿಸುವAತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ