ಕುಂದಾಪುರ: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಮಾಡುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು.
ಶನಿವಾರ ಕೋಟೇಶ್ವರದಲ್ಲಿ ಮಾತನಾಡಿದ ಅವರು, ಭಾರತ ಸರಕಾರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬೇಡಿಕೆ ಇದೆ. ಶೀಘ್ರದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು
ಕರ್ನಾಟಕ ರಾಜ್ಯದಲ್ಲಿ ಶೇ.85 ಮೊದಲ ಡೋಸ್ ಹಾಗೂ ಶೇ.45 ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ನಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ. ಮೊದಲ ಡೋಸ್ ನೀಡುವಿಕೆಯಲ್ಲಿ ಐದನೇ ಸ್ಥಾನದಲ್ಲಿದೆ ಎಂದರು.
ದುಬೈ, ಮಧ್ಯಪ್ರಾಚ್ಯ ದೇಶದಲ್ಲಿ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿರುವುದರಿಂದ ಹೊರದೇಶಗಳಲ್ಲಿ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಬೇಡಿಕೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಮುಖಂಡರಾದ ರಾಜೇಶ್ ಕಾವೇರಿ ಮೊದಲಾದವರು ಉಪಸ್ಥಿತರಿದ್ದರು