ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಪರ್ಕಳ ಇದರ 2020- 2021ನೇ ಸಾಲಿನ ವಾರ್ಷಿಕ ಮಹಾಸಭೆಯು ಇದೇ ಅ. 31ರ ಭಾನುವಾರದಂದು ಬೆಳ್ಳಿಗ್ಗೆ 10ಕ್ಕೆ ಮಣಿಪಾಲದ ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಅಂದು ಮಧ್ಯಾಹ್ನ 1.30ರಿಂದ ಸಂಸ್ಥೆಯ ವಿಂಶತಿ ವರ್ಷದ ಪ್ರಯುಕ್ತ ಸುಪ್ರಸಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಯಕ್ಷಲೋಕ ವಿಜಯ ಎಂಬ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ಅಶೋಕ್ ಕಾಮತ್ ಕೋಡಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















