ಉಡುಪಿ: ಹಿರಿಯ ವಕೀಲ ಅಲೆವೂರು ಶ್ರೀಪತಿ ಆಚಾರ್ಯ ನಿಧನ

ಉಡುಪಿ: ಉಡುಪಿಯ ಹಿರಿಯ ವಕೀಲ ಅಲೆವೂರು ಶ್ರೀಪತಿ ಆಚಾರ್ಯ (83) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬುಧವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.