ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದರು.

















