ಇಂದಲ್ಲ, ನಾಳೆ ನಟ ಪುನೀತ್​​ ರಾಜ್​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ನಟ ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸರ್ಕಾರ ಹಾಗೂ ಡಾ.ರಾಜ್​ ಕುಟುಂಬದ ತೀರ್ಮಾನದಂತೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್​ ಅವರ ಅಂತ್ಯಕ್ರಿಯೆ ನೆರವೇರಲಿದೆ. ಕಂಠೀರವ ಸ್ಟೇಡಿಯಂನಲ್ಲಿರುವ ಡಾ.ರಾಜ್ ಹಾಗೂ ಪಾರ್ವತಮ್ಮ ರಾಜ್​ಕುಮಾರ್​ ಸಮಾಧಿ ಪಕ್ಕದಲ್ಲೇ ಅಪ್ಪುವಿನ ಅಂತ್ಯಕ್ರಿಯೆ ನಡೆಯಲಿದೆ.