ಉಡುಪಿ: ಎಲ್ಐಸಿ ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ
‘ವಜ್ರಮಹೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭವು ನಾಳೆ (ಅ.31) ಬೆಳಿಹ್ಗೆ 10.30 ಕ್ಕೆ ನಡೆಯಲಿದೆ.
ಭಾರತೀಯ ಜೀವ ವಿಮಾ ನಿಗಮ ಉಡುಪಿ ಭಾರತೀಯ ಕಚೇರಿಯ ಹಿರಿಯ ವಿಭಾಗಾಧಿಕಾರಿ ಬಿಂದು ರೋಬಾರ್ಟ್ ಕಟ್ಟಡವನ್ನು ಉದ್ಘಾಟಿಸುವರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ ಸಮಾರಂಭವನ್ನು ಉದ್ಘಾಟಿಸುವರು. ಉಡುಪಿ ಎಲ್ಐಸಿ ಎಂಪ್ಲಾಯಿಸ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷ ಕೆ. ಕೃಷ್ಣ ಅಧ್ಯಕ್ಷತೆ ವಹಿಸುವರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಅಥಿತಿಯಾಗಿ ಭಾಗವಹಿಸುವರು. ಎಲ್ಐಸಿ ಎಂಪ್ಲಾಯಿಸ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಪಾಧ್ಯಕ್ಷ ದಯಾನಂದ ಎ., ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಉಪಸ್ಥಿತರಿರುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.