ಬೆಂಗಳೂರು: ಕನ್ನಡದ ಖ್ಯಾತ ನಟ ಪವರ್ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆಯು ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನೆರವೇರಿತು.
ಡಾ.ರಾಜ್‌ಕುಮಾರ್ ಸಮಾಧಿಯ ಪಕ್ಕದಲ್ಲೆ ಪುನೀತ್ ಅಂತ್ಯಕ್ರಿಯೆ ನಡೆಸಲಾಯಿತು. ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆ ಮೂಲಕ ಪುನೀತ್ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಇನ್ನು ಈಡಿಗ ಸಮುದಾಯದ ಸಂಪ್ರದಾಯದಂತೆ ಪುನೀತ್ ಅಂತ್ಯಕ್ರಿಯೆ ನಡೆದಿದ್ದು, ರಾಘವೇಂದ್ರ ರಾಜ್‌ಕುಮಾರ್ ಹಿರಿಯ ಪುತ್ರ ವಿನಯ್ ರಾಜ್‌ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ರಾಣೆಬೆನ್ನೂರಿನ ಶರಣಬಸವೇಶ್ವರ ಮಠದ ಡಾ. ಪರಮಾನಂದ ಸ್ವಾಮೀ ನೇತೃತ್ವದಲ್ಲಿ ನೆರವೇರಿಸಿದರು.
ಹೂವಿನ ಪಲ್ಲಕ್ಕಿಯಲ್ಲಿ ಈಡಲಾಗಿದ್ದ ಪಾರ್ಥಿವ ಶರೀರವನ್ನು ಮೂರು ಪ್ರದಕ್ಷಿಣೆ ಹಾಕಿಸಿ ಅಂತಿಮ ಯಾತ್ರೆ ನಡೆಸಿದರು, ವಿನಯ್ ರಾಜ್‌ಕುಮಾರ್ ಪಾರ್ಥಿವ ಶರೀರದ ಅಂತಿಮ ವಿಧಿಗಳನ್ನು ನೆರವೇರಿಸಿದರು.