ಉಡುಪಿ: ರಾಜ್ಯದಲ್ಲಿರುವ ಎಲ್ಲಾ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದರು.
ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ಕಾನೂನಿನ ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.
ಮುಂದಿನ ವರ್ಷದಿಂದ ಪ್ರಶಸ್ತಿ ಆಯ್ಕೆಗೆ ಏಕರೂಪ ನಿಯಮಗಳನ್ನು ರೂಪಿಸಲಾಗುವುದು. ಈ ಬಾರಿ ಅರ್ಹರಿಗೆ ರಾಜ್ಯ ಪ್ರಶಸ್ತಿ ನೀಡಲಾಗಿದೆ. ಈವರೆಗೆ ಅನುಸರಿಸುತಿದ್ದ ಕ್ರಮ ಬಿಟ್ಟು ತೆರೆಮರೆ ಪ್ರತಿಭೆಗಳನ್ನು ಹುಡುಕಿಕೊಂಡು ಹೋಗಿ ಪ್ರಶಸ್ತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.