ಉಡುಪಿ: ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮತ್ತು ಧನ್ವಂತರಿ ಜಯಂತಿಯ ಅಂಗವಾಗಿ “ಪೋಷಣಕ್ಕಾಗಿ ಆಯುರ್ವೇದ” ಎನ್ನುವ ಶೀರ್ಷಿಕೆಯಡಿಯಲ್ಲಿ ಮಣಿಪಾಲದ ಮುನಿಯಾಲ್ ಆಯುರ್ವೇದ ಸಂಸ್ಥೆಯು ನ.2ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು.
ಆಯುರ್ವೇದದಲ್ಲಿ ಹೇಳಿದ ವಿವಿಧಪಥ್ಯಾಹಾರಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯನ್ನು ಸಂಸ್ಥೆಯ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಕಾರ್ಯಕ್ರಮ ಉದ್ಘಾಟಿಸಿ, ಆಹಾರ ಮತ್ತು ಪಥ್ಯಾಹಾರ ಮತ್ತು ಸಮಕಾಲೀನಕ್ಕೆ ಅದರ ಅಗತ್ಯತೆಯ ಬಗ್ಗೆ ತಿಳಿಸಿದರು.
ಗೋಸ್ವಾಲ್ ಆಯುರ್ವೇದ ಕೇಂದ್ರದ ಮುಖ್ಯಸ್ಥರಾದ ಡಾ.ತನ್ಮಯ ಗೋಸ್ವಾಮಿ ಆಯುರ್ವೇದ ಮತ್ತು ಧನ್ವಂತರಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಸಂಸ್ಥೆಯ ನಿರ್ದೇಶಕಿ ಡಾ.ಶ್ರದ್ಧಾ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ.ಹರಿಪ್ರಸಾದ್ ಶೆಟ್ಟಿ, ಸ್ನಾತಕೋತ್ತರ ಶಿಕ್ಷಣ ವಿಭಾಗದ ಡೀನ್ ಡಾ.ಗುರುರಾಜ ಡಿ, ಸ್ನಾತಕ ವಿಭಾಗದ ಡೀನ್ ಡಾ.ರಮೇಶ್, ಸ್ವಸ್ಥ ವೃತ್ತ ವಿಭಾಗದ ಮುಖ್ಯಸ್ಥರಾದ ಡಾ.ವ್ಯಾಸರಾಜ್ ತಂತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಯಾಬಿಟೀಸ್, ಅಧಿಕ ರಕ್ತದೊತ್ತಡ, ಆಮ್ಲಪಿತ್ತ ರೋಗಗಳಲ್ಲಿ ತೆಗೆದುಕೊಳ್ಳಬೇಕಾದ ಪಥ್ಯಾಹಾರ ಜೊತೆಗೆ ಪೋಷಣಯುಕ್ತ ಆಹಾರಗಳ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಅಪರಾಹ್ನ ನಂತರ ವಿದ್ಯಾರ್ಥಿಗಳಿಗೆ ಕೋವಿಡ್ ೧೯ಕ್ಕೆ ಪಥ್ಯಾಹಾರ ಶೀರ್ಷಿಕೆಯಡಿ ಸ್ಪರ್ಧೆ ಏರ್ಪಡಿಸಲಾಯಿತು