ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಮಾತನಾಡಿ, ವಿದ್ಯಾರ್ಥಿಗಳಾದ ನೀವೆಲ್ಲರೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಸಮಾರಂಭದಲ್ಲಿ ಉಪಸ್ಥಿತರಿರುವ ಟ್ರೈನಿಂಗ್ ಆಫೀಸರ್ ಅಭಿಲಾಷ್ ಕ್ಷತ್ರೀಯ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಹಾಗೂ ಆಸಕ್ತಿಯಿಂದ ಕೂಡಿ ಕೆಲಸಮಾಡಬೇಕು ಎಂದು ಹೇಳಿದರು.
ಉಪಸಂಯೋಜಕಿ ಮಮತಾ ರೈ ಮಾತನಾಡಿ, ಬದುಕು ಎನ್ನುವ ಯುದ್ಧದಲ್ಲಿ ತೇಜಸ್ಸು, ಧೈರ್ಯ, ಸ್ಥೈರ್ಯ, ಸ್ವಾಭಿಮಾನ ಅತ್ಯವಶ್ಯಕ ರಾಷ್ಟ್ರದ ಉನ್ನತಿಗೆ ಈ ದಿನದ ನಿಮ್ಮ ನಿರ್ಧಾರವೇ ಮುನ್ನುಡಿಯಾಗಲಿ ಎಂದು ಶುಭ ಹಾರೈಸಿದರು.
ವಿದ್ಯಾರ್ಥಿ ನಾಯಕನಾಗಿ ಪವನ್ ಕುಮಾರ್ ಶೆಟ್ಟಿ, ಉಪನಾಯಕಿ- ಚೈತಾಲಿ ಉಪ್ಪೂರು, ಕಾರ್ಯದರ್ಶಿ- ವನಶ್ರೀ, ಶೈಕ್ಷಣಿಕ ಕಾರ್ಯದರ್ಶಿ ಪ್ರಣವ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರಾವ್ಯ, ಕ್ರೀಡಾ ಕಾರ್ಯದರ್ಶಿಯಾಗಿ ದಿಶಾನ್ ಕುಮಾರ್ ಶೆಟ್ಟಿ, ಸಮಾಜ ಸೇವಾ ಕಾರ್ಯದರ್ಶಿಯಾಗಿ ರಿಯಾ ಪ್ರಮಾಣ ವಚನ ಸ್ವೀಕರಿಸಿದರು.
ಕಾಲೇಜಿನ ಆಡಳಿತ ಮಂಡಳಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು.