ಉಡುಪಿ: ಲಾರಿಯಡಿ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಅಂಬಾಗಿಲು ಬಳಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಣಮ್ಯ (8) ಎಂದು ಗುರುತಿಸಲಾಗಿದೆ. ಪ್ರಣಮ್ಯ ತಾಯಿಯೊಂದಿಗೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದಳು.
ಈ ವೇಳೆ ಹಿಂದಿನಿಂದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಪ್ರಣಮ್ಯ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ತಾಯಿ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಚಾಲಕನ ವಿರುದ್ಧ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.